ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ.
40 ವರ್ಷದ ಮಲ್ಲಿಕಾರ್ಜುನ ಕುಲಕರ್ಣಿ ಮೃತ ಪಿಎಸ್ಐ. ಮಲ್ಲಿಕಾರ್ಜುನ ಕುಲಕರ್ಣಿ ಚಲಿಸುತ್ತಿದ್ದ ಕಾರು ಕಿರೇಸೂರು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮಲ್ಲಿಕಾರ್ಜುನ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ ಅವರು ಅಮಿನಗಡ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.