alex Certify BIG NEWS: ಕಾರು-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳುರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ.

ಮಹೇಶ್ (50) ಹಾಗೂ ಮಹದೇವಪ್ಪ (55) ಮೃತರು. ಮೈಸೂರಿನಿಂದ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಕಾರು ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...