ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಸೋಮವಾರದಂದು ಮಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಾರ್ಕಳದಲ್ಲಿ ಬಿಜೆಪಿಯ ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಅವರ ಪಕ್ಷದವರೇ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ತನು, ಮನ, ಧನದ ಸಹಕಾರದ ಭರವಸೆ ಅವರಿಂದ ಸಿಕ್ಕಿದೆ ಎಂದು ಪ್ರಮೋದ್ ಮುತಾಲಿಕ್ ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಇನ್ನು ಇದಕ್ಕೆ ತಿರುಗೇಟು ನೀಡಿರುವ ಸಚಿವ ಸುನಿಲ್ ಕುಮಾರ್, ನೀವು ಆಮಿಷಕ್ಕೆ ಒಳಗಾಗಿ ಕಾರ್ಕಳದಿಂದ ಸ್ಪರ್ಧಿಸಲು ಮುಂದಾಗಿದ್ದೀರಿ ಎಂಬ ಅನುಮಾನವಿತ್ತು. ಅದು ಈಗ ನಿಜವಾಗಿದೆ ಎಂದಿದ್ದಾರೆ. ಅಲ್ಲವೇ ನಿಮ್ಮ ಸ್ಪರ್ಧೆಯ ಉದ್ದೇಶ ಕಾರ್ಕಳದ ಅಥವಾ ಹಿಂದುತ್ವದ ಹಿತವಲ್ಲ ಎಂದು ಟಾಂಗ್ ನೀಡಿದ್ದಾರೆ.