alex Certify BIG NEWS: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ; 12 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ; 12 ಜನ ಗಂಭೀರ

ಪಾಟ್ನಾ: ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 6 ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.

ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಫ್ಯಾಕ್ಟರಿಯಲ್ಲಿ ಏಕಾಏಕಿ ಬಾಯ್ಲರ್ ಸ್ಫೋಟಗೊಂಡಿದೆ. ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 6 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಬಹುತೇಕ ಭಾಗ ಛಿದ್ರ ಛಿದ್ರಗೊಂಡಿದ್ದು, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. 5 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...