ಚೆನ್ನೈ: ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರ ಚೆನ್ನೈ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತಮಿಳುನಾಡಿನ ರಾಜಧಾನಿ ಚೆನ್ನೈನ ನುಂಗಂಬಾಕ್ಕಂನಲ್ಲಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, 6 ಮಂದಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಪಿ. ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.
ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಆರೋಪ ಹಿನ್ನೆಲೆಯಲ್ಲಿ ಮೇ 18ರಂದು ಸಿಬಿಐ ಅಧಿಕಾರಿಗಳು ಕಾರ್ತಿ ಚಿದಂಬರಂ ಹಾಗೂ ಪಿ. ಚಿದಂಬರಂ ಅವರ ಚೆನ್ನೈ, ದೆಹಲಿ ನಿವಾಸ, ಕಚೇರಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದರು. ಇದೀಗ ಕಾರ್ತಿ ಚಿದಂಬರಂ ಅವರ ಚೆನ್ನೈನ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.