ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಮಿಷನ್ ಕೇಳಿದ್ದಾರೆ ಎಂದು ಆರೋಪಿಸಿ ಸ್ವಪಕ್ಷದ ನಾಯಕರು, ಹಿಂದೂ ವಾಹಿನಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಾಟೀಲ್ ಎಂಬುವವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ದೂರು ನೀಡಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಈಶ್ವರಪ್ಪ, ಪಂಚಾಯತ್ ರಾಜ್ ಇಲಾಖೆಯಿಂದ ಸಂತೋಷ್ ಅವರಿಗೆ ಯಾವುದೇ ಕಾರ್ಯಾದೇಶ ಮಂಜೂರು ಮಾಡಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಸಂತೋಷ್ ಪಾಟೀಲ್ ಎಂಬುವವರು ಯಾರು ಎಂಬುದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾವುದೋ ಷಡ್ಯಂತ್ರ ನಡೆದಿದೆ. ಸಂತೋಷ್ ಪಾಟೀಲ್ ಯಾರು ಎಂಬ ಬಗ್ಗೆ ಬೆಳಗಾವಿ ಜಿಲ್ಲಾಧ್ಯಕ್ಷರನ್ನೂ ಕೇಳಿದ್ದೇನೆ. ಅವರಿಗೂ ಗೊತ್ತಿಲ್ಲ ಎಂದಿದ್ದಾರೆ. ನನ್ನ ವಿರುದ್ಧ ಗುತ್ತಿಗೆದಾರರು ಕೂಡ ಕಮಿಷನ್ ಆರೋಪ ಮಾಡಿ ನಾಯಕರಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದರ ಹಿಂದೆ ದೊಡ್ಡ ಪಿತೂರಿ ಅಡಗಿದೆ ಎಂದು ಕಿಡಿಕಾರಿದರು.
ಒಳ ಚರಂಡಿಯೊಳಗೆ ಬಿದ್ದ ಕರು: 4 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ
ನಮ್ಮ ಇಲಾಖೆಯಿಂದ ಯಾವುದೇ ಕಾರ್ಯಾದೇಶ ಕೊಟ್ಟಿಲ್ಲ ಎಂದ ಮೇಲೆ ಹಣ ಕೊಡುವ ಪ್ರಶ್ನೆ ಬರಲ್ಲ. ಈ ಷಡ್ಯಂತ್ರದ ಬಗ್ಗೆ ಮಾರ್ಚ್ 10ರಂದೇ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದು ಶೀಘ್ರದಲ್ಲಿ ಬಯಲಾಗಲಿದೆ ಎಂದು ಹೇಳಿದರು.