ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ಘೋಷಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಕೊರೊನಾ ಆತಂಕ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಿಗೆ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆಯಾಗಿದ್ದು, ರಜೆ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಡಿಕೆಶಿಗೆ ಷಡ್ಯಂತ್ರ ನಡೀತಿದೆ ಅನ್ನಿಸಿರಬಹುದು: ಸಿದ್ಧರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುತ್ತೋಲೆ ಮೂಲಕ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.