alex Certify BIG NEWS: ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು ಸುದ್ದಿ; ಶಿಕ್ಷಣ ಇಲಾಖೆ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು ಸುದ್ದಿ; ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ಘೋಷಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಕೊರೊನಾ ಆತಂಕ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಿಗೆ ಮಾರ್ಚ್ 15ರಿಂದ ಮಾರ್ಚ್ 30ರವರೆಗೆ ರಜೆ ಘೋಷಿಸಲಾಗಿದೆ ಎಂಬ ಸುತ್ತೋಲೆ ಹರಿದಾಡುತ್ತಿದೆ. ಆದರೆ ಇದೊಂದು ನಕಲಿ ಸುತ್ತೋಲೆಯಾಗಿದ್ದು, ರಜೆ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಡಿಕೆಶಿಗೆ ಷಡ್ಯಂತ್ರ ನಡೀತಿದೆ ಅನ್ನಿಸಿರಬಹುದು: ಸಿದ್ಧರಾಮಯ್ಯ

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುತ್ತೋಲೆ ಮೂಲಕ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...