ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದಿಂದ ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ನಮ್ಮ ರಾಜ್ಯದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೂ ನೀರಿಲ್ಲದಾಗಿದೆ. ಕೆ.ಆರ್.ಎಸ್ ಜಲಾಶಯದಲ್ಲಿ ಒಳಹರಿವು ಕಡಿಮೆಯಾಗಿದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲು ಆಗುತ್ತಿಲ್ಲ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವರೊಂದಿಗೆ ಸಭೆ ನಡೆಸಿ ಬಳಿಕ ತೀರ್ಮಾನ ಮಾಡಲಾಗುವುದು. ಮಳೆಯೇ ಬಾರದಿದ್ದರೆ ಬರಗಾಲ ಎಂದು ಘೋಷಿಸಲಾಗುವುದು. ಮೋಡ ಬಿತ್ತನೆ ಬಗ್ಗೆಯೂ ಸರ್ಕಾರ ಅಂತಿಮವಾಗಿ ತೀರ್ಮಾನಿಸಲಿದೆ. ಈ ತಿಂಗಳ ಒಳಗೆ ಉತ್ತಮ ಮಳೆಯಾಗಲಿದೆ ಎಂಬ ವರದಿ ಇದೆ. ಹಾಗಾಗಿ ಆಶಾದಾಯಕವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.