alex Certify BIG NEWS: ಕಾಶಿಗೆ ತೆರಳುವ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ಶ್ರಾವಣ ಮಾಸದ ಕೊನೆ ವಾರದಲ್ಲಿ ಭಾರತ್‌ ಗೌರವ್‌ ರೈಲು ಯೋಜನೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಶಿಗೆ ತೆರಳುವ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ಶ್ರಾವಣ ಮಾಸದ ಕೊನೆ ವಾರದಲ್ಲಿ ಭಾರತ್‌ ಗೌರವ್‌ ರೈಲು ಯೋಜನೆ ಆರಂಭ

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶೀಲನೆ ಹಾಗೂ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಚಿವರು, ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದುಗಳ ಆಸೆ. ಅವರ ಆಶಯ ಸಹಕಾರವಾಗುವ ನಿಟ್ಟಿನಲ್ಲಿ ಈ ರೈಲು ಯೋಜನೆ ಆರಂಭಿಸಲಾಗುತ್ತಿದೆ ಎಂದರು.

ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ರೈಲು ಯೋಜನೆ ಭಾರತ್‌ ಗೌರವ್‌ ರೈಲು ಸೇವೆಯನ್ನು ಆರಂಭಿಸುತ್ತಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂಪಾಯಿಗಳ ಭೌತಿಕ ಬ್ಯಾಂಕ್‌ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತಗೆದುಕೊಳ್ಳಲಾಗಿದೆ ಎಂದು ಹೇಳಿದರು.

7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂ. ಗಳನ್ನು ಸಹಾಯಧನವನ್ನಾಗಿ ಯಾತ್ರಾರ್ಥಿಗಳ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೀಡಲಾಗುವುದು. ಯಾತ್ರೆಯಲ್ಲಿ ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯೆ ವೀಕ್ಷಣೆಗೆ ಅವಕಾಶ ನಿಡಲಾಗುತ್ತಿದೆ. 14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...