ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸಹಾಯಧನ ಘೋಷಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಬೊಮ್ಮಾಯಿ, ಪ್ರತಿವರ್ಷ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.
ವಿಚಿತ್ರ ಆದರೂ ನಿಜ: ಪಾಕಿಸ್ತಾನದ 11 ಸಾವಿರ ಶಾಲೆಗಳಲ್ಲಿ ಶಿಕ್ಷಕರಿದ್ದರೂ ಪಾಠ ಕೇಳಲು ವಿದ್ಯಾರ್ಥಿಗಳೇ ಇಲ್ಲ…!
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ ಮೊದಲಾದ ಪುಣ್ಯಕ್ಷೇತ್ರಗಳಿಗೆ ಕೆ ಎಸ್ ಟಿ ಡಿ ಸಿ ವತಿಯಿಂದ ಪ್ಯಾಕೇಜ್ ಟ್ರಿಪ್ ವ್ಯವಸ್ಥೆ ಮಾಡಲಾಗುವುದು ಎಂದರು.
ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುವುದು. ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಜೋಗದಲ್ಲಿ 116 ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ ನಿರ್ಮಾಣ ಹಾಗೂ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಾಗಿಡುವುದು. ಶ್ರೀಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು ಎಂದು ತಿಳಿಸಿದರು.