ಬೆಂಗಳೂರು: ನಟ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಿ ಕಮೀಷ್ ನರ್ ಆದೇಶ ಹೊರಡಿಸಿದ್ದಾರೆ.
ನಟ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಪತ್ರ ಬರೆದು ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಪತ್ರದ ಸಮೇತ ನಿರ್ಮಾಪಕ, ಸುದೀಪ್ ಆಪ್ತ ಜಾಕ್ ಮಂಜು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಐಪಿಸಿ ಸೆಕ್ಷನ್ 504, 506 ಹಾಗೂ ಐಟಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.