
ರಾಯಚೂರು: ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸಿದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ.
ರಾಯಚೂರಿನ ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಶಿವನಗೌಡ ನಾಯಕ್ ಪರ ನಟ ಕಿಚ್ಚ ಸುದೀಪ್ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು, ಜನರು ಕಿಚ್ಚನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ಆರಂಭವಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ.