ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಬೈಕ್ ಸವಾರನಿಗೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಬೈಕ್ ಸವಾರನ ಮೇಲೆಯೇ ಬಸ್ ಹರಿದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.