ಬೆಳಗಾವಿ: ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಗಡಿ ಜಿಲ್ಲೆ, ಕುಂದಾನಗರಿ ಬೆಳಗಾವಿಯಿಂದ ಮತ ಬೇಟೆ ಆರಂಭಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಿದ್ದು, ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿಗೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.
ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಂತರ ಕರ್ನಾಟಕಕ್ಕೆ ಇದೇ ಮೊದಲು ಆಗಮಿಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಯುವಜನತೆಗಾಗಿ ಕಾಂಗ್ರೆಸ್ ನ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.