ಬೆಳಗಾವಿ: ದಕ್ಷಿಣ ಕನ್ನಡ, ಮಂಗಳೂರು, ಮಂಡ್ಯದ ಬಳಿಕ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ ಮೂರು ಪ್ರಕರಣಗಳು ಬೆಳಕಿಗೆ ಬಂದಿದೆ.
ಕಾಲೇಜು ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಇಬ್ಬರು ಯುವತಿಯರನ್ನು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಅನ್ಯಕೋಮಿನ ಯುವಕರ ಜೊತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿ ಏಕಾಏಕಿ ದಾಳಿ ನಡೆಸಿದ ಕಿಡಿಗೇಡಿಗಳು ಇಬ್ಬರು ಯುವತಿಯರನ್ನು ಕೂಡಿಹಾಕಿ ಅವರ ಮುಖಕ್ಕೆ ಕಟ್ಟಿಕೊಂಡಿದ್ದ ಬಟ್ಟೆ ತೆಗೆಯುವಂತೆ ಹೇಳಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ಪುಂಡರು ವಿಡಿಯೋವನ್ನು ರೆಕಾರ್ಡ್ ಮಾಡಿ ಹರಿಬಿಟ್ಟಿದ್ದಾರೆ.
6 ತಿಂಗಳಿನಿಂದ ಹೊಟ್ಟೆಯಲ್ಲಿತ್ತು ಮೊಬೈಲ್……! ಎಕ್ಸ್ ರೇ ನೋಡಿ ವೈದ್ಯರು ಶಾಕ್
ಇನ್ನೊಂದು ಪ್ರಕರಣದಲ್ಲಿ ರಾಯಬಾಗ ಮೂಲದ ಯುವಕ ಹಾಗೂ ಸಂಕೇಶ್ವರ ಮೂಲದ ಯುವತಿ ಅ.14ರಂದು ಬೆಳಗಾವಿಗೆ ಬಂದಿದ್ದಾಗ ಆಟೋ ಹತ್ತುತ್ತಿದ್ದಂತೆ ಇಬ್ಬರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಟೋ ಚಾಲಕ ಹಾಗೂ ಇನ್ನಿಬ್ಬರು ಯುವಕ-ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್, ಹಣ, ಆಧಾರ್ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಆಟೋ ಚಾಲಕ ದಾವತ್ ಕತೀಬ್, ಅಯೂಬ್ ಮತ್ತು ಯುಸೂಫ್ ಪಠಾಣ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
BIG NEWS: ಹೇಳುವುದು ಆಚಾರ, ಮಾಡುವುದು ಅನಾಚಾರ; ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯ ನೋಡಿದ್ದು ಯಾವ ಪಕ್ಷದವರು ? ಬಿಜೆಪಿಗೆ ತಿರುಗೇಟು ನೀಡಿದ JDS
ಇದೇ ವೇಳೆ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಯುವಕನ ಜೊತೆ ಮಾತನಾಡಿದ್ದಕ್ಕೆ ಯುವಕ ಹಾಗೂ ಯುವತಿಯ ಮೇಲೆ ಪುಂಡರ ಗುಂಪೊಂದು ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ.
ಒಟ್ಟಾರೆ ಕುಂದಾನಗರಿ ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದ್ದರೂ ಪೊಲೀಸರು ತ್ವರಿತ ಕ್ರಮಕ್ಕೆ ಮುಂದಾಗುತ್ತಿಲ್ಲ, ಸಂಧಾನ ಮಾಡಿಸಿ ಆರೋಪಿಗಳನ್ನು ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.