ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ್ದ ಶಂಕಿತ ಉಗ್ರ ಶಾರಿಕ್ ನನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಶಂಕಿತ ಉಗ್ರ ಶಾರಿಕ್ ಗೆ ಗಂಭೀರವಾದ ಗಾಯಗಳಾಗಿದ್ದವು. ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಾರಿಕ್ ಗೆ ಶೇ.70ರಷ್ಟು ಸುಟ್ಟಗಾಯಗಳು ಕಡಿಮೆಯಾಗಿದ್ದು, ಗುಣಮುಖನಾಗುತ್ತಿದ್ದಾನೆ. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಆತನನ್ನು ಮಂಗಳೂರು ಪೊಲೀಸರು ಇಂದು ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಶಾರಿಕ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಂಕಿತ ಉಗ್ರ ಶಾರಿಕ್ ಗೆ ಸುಟ್ಟಗಾಯಗಳಾಗಿರುವ ಹಿನ್ನೆಲೆಯಲ್ಲಿ ಆತನನ್ನು ಈವರೆಗೆ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಸಂಪೂರ್ಣ ಗುಣಮುಖನಾದ ಬಳಿಕ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.