alex Certify BIG NEWS: ಕುಟುಂಬದ ಐವರ ಸಾವು ಪ್ರಕರಣ; ಹಲ್ಲೆಗೆರೆ ಶಂಕರ್ ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಟುಂಬದ ಐವರ ಸಾವು ಪ್ರಕರಣ; ಹಲ್ಲೆಗೆರೆ ಶಂಕರ್ ಪೊಲೀಸರ ವಶಕ್ಕೆ

ಬೆಂಗಳೂರು: ಬ್ಯಾಡರಹಳ್ಳಿಯ ಮನೆಯಲ್ಲಿ ಐವರು ಕುಟುಂಬ ಸದಸ್ಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆ ಸಂಪಾದಕ ಹಲ್ಲೆಗೆರೆ ಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕುಟುಂಬ ಸದಸ್ಯರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದ ಅಡಿಯಲ್ಲಿ ಶಂಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕರ್ ಅವರ ಕಿರಿಯ ಮಗಳು ಸಿಂಧೂರಾಣಿ ಪತಿ ಶ್ರೀನಾಥ್ ನನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ’ಶಾಕರ ಪತ್ರಿಕೆ’ ಸಂಪಾದಕ ಶಂಕರ್ ಅವರ ಮನೆಯಲ್ಲಿ ಪತ್ನಿ ಭಾರತಿ, ಹೆಣ್ಣುಮಕ್ಕಳಾದ ಸಿಂಚನಾ, ಸಿಂಧೂರಾಣಿ ಹಾಗೂ ಮಗ ಮಧು ಸಾಗರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಮಗಳು ಸಿಂಧೂರಾಣಿ ತನ್ನ 9 ತಿಂಗಳ ಮಗುವನ್ನು ಬಟ್ಟೆಯಿಂದ ಕತ್ತು ಬಿಗಿದು, ಉಸಿರುಗಟ್ಟಿಸಿ ಸಾಯಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿತ್ತು. ಡೆತ್ ನೋಟ್ ನಲ್ಲಿ ಮಗ ಮಧುಸಾಗರ್ ತಂದೆ ಶಂಕರ್ ಅಕ್ರಮ ಸಂಬಂಧಗಳ ಬಗ್ಗೆ ಆರೋಪಿಸಿದ್ದ.

ಕುಟುಂಬ ಸದಸ್ಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ವಿಚಾರಣೆಗೊಳಪಡಿಸಿದ್ದ ಪೊಲೀಸರು ಇದೀಗ ಶಂಕರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...