alex Certify BIG NEWS: ಕುತೂಹಲಕ್ಕೆ ಕಾರಣವಾಯ್ತು BSY ಜೊತೆಗಿನ ಬಸವರಾಜ ಬೊಮ್ಮಾಯಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲಕ್ಕೆ ಕಾರಣವಾಯ್ತು BSY ಜೊತೆಗಿನ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ ʼಕಾವೇರಿʼ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ ಎನ್ನಲಾಗಿದೆ.

ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...