ದಾವಣಗೆರೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ದಿನಾಂಕ ಮುಗಿದರೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕದಿರುವುದು ಅಚ್ಚರಿಗೆ ಕಾರಣವಾಗಿದೆ.
ದಾವಣಗೆರೆ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್, ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿಲ್ಲ. 1 ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ಕಾಂಗ್ರೆಸ್ ಹೇಳಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ್ ಸ್ಪರ್ಧೆಯಿಮ್ದ ಹಿಂದೆ ಸರಿದಿದ್ದಾರಾ? ಎಂಬ ಚರ್ಚೆ ಶುರುವಾಗಿದೆ.
ಈಗಾಗಲೇ ಶಾಮನೂರು ಶಿವಶಂಕರಪ್ಪ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಎಸ್.ಎಸ್.ಮಲ್ಲಿಕಾರ್ಜುನ ಅರ್ಜಿ ಸಲ್ಲಿಸಿಲ್ಲ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಬೇರೆ ಪಕ್ಷದತ್ತ ಮಲ್ಲಿಕಾರ್ಜುನ ಮುಖ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.