alex Certify BIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ಕರೆದಿದ್ದು, ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ವಿ. ಸೋಮಣ್ಣ, ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ.

ಚಾಮರಾಜನಗರದಲ್ಲಿ ನಡೆದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯಕ್ರಮದಿಂದಲೂ ವಿ. ಸೋಮಣ್ಣ ದೂರ ಉಳಿದಿದ್ದರು. ಹೀಗಾಗಿ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಹರಡಿತ್ತು.

ಇದೀಗ ಇಂದು ಮಧ್ಯಾಹ್ನ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ವಿ. ಸೋಮಣ್ಣ, ಈ ಎಲ್ಲ ವಿಚಾರಗಳ ಕುರಿತಂತೆ ಸ್ಪಷ್ಟನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...