ಮೈಸೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ.
ಶಿಕ್ಷಕರ ಹುದ್ದೆಗೆ ಸಲ್ಲಿಕೆಯಾದ ಅರ್ಜಿ ಕಂಡು ಶಾಕ್ ಆದ ಅಧಿಕಾರಿಗಳು..!
ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಚಿವರು, ಸುತ್ತೂರು ಶ್ರೀಗಳ ಮಾತೋಶ್ರೀ ಅವರ ಅಗಲಿಕೆಗೆ ಸಂತಾಪ ಸೂಚಿಸಿದರು. ಬಳಿಕ ಶ್ರೀಗಳೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಪ್ರಹ್ಲಾದ್ ಜೋಶಿ ಅವರು ಸುತ್ತೂರು ಶ್ರೀಗಳನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.