ಬೆಂಗಳೂರು: ಮಳೆ ಅವಾಂತರದಿಂದಾಗಿ ಜನರು ಸಂಕಷ್ಟಕ್ಕೀಡಾಗಿರುವ ಈ ಸಂದರ್ಭದಲ್ಲಿ ಜನಸ್ವರಾಜ್ ಯಾತ್ರೆ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಕುಮಾರಸ್ವಾಮಿ ಕೇಳಿ ನಾವು ಸರ್ಕಾರ ನಡೆಸಬೇಕಾ ? ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ್ದೇವೆ, ಜನರ ಸಮಸ್ಯೆ ಕೇಳಿದ್ದೇವೆ. ಕುಮಾರಸ್ವಾಮಿ ಅವರನ್ನು ಕೇಳಿ ನಾವು ಸರ್ಕಾರ ನಡೆಸಬೇಕಾ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯದ ಹಿಂದಿನ ಕಾರಣ ತೆರೆದಿಟ್ಟ ʼನಾಸಾʼ
ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ಅನ್ನದಾತ ಆಪತ್ತಿನಲ್ಲಿದ್ದಾನೆ. ಇಂಥ ಸಂದರ್ಭದಲ್ಲಿ ಜನಸ್ವರಾಜ್ ಯಾತ್ರೆ ಹೆಸರಲ್ಲಿ ಸರ್ಕಾರ ಜಾತ್ರೆ ನಡೆಸುತ್ತಾ ಅಧಿಕಾರ, ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಗುಡುಗಿದ್ದರು.