alex Certify BIG NEWS: ಕುರ್ಚಿ ವಿಚಾರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಬೆಂಬಲಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುರ್ಚಿ ವಿಚಾರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಬೆಂಬಲಿಗರು

ರಾಮನಗರ: ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಬೆಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಎಸ್.ಲಿಂಗರಾಜು ಹಾಗೂ ಬಮೂಲ್ ನಿರ್ದೇಶಕ ಜಯಮುತ್ತು ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ ಗಲಾಟೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಬಡಿದಾಟಕ್ಕೆ ಕಾರಣವಾಗಿದೆ. ಬಮೂಲ್ ಉಪ ವ್ಯವಸ್ಥಾಪಕ ಹೇಮಂತ್ ಕುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಜೆಡಿಎಸ್ ನ ಜಯಮುತ್ತು ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರ ನಡೆಗೆ ಬಿಜೆಪಿಯ ಲಿಂಗೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿದೆ. ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಕಾರ್ಯಕರ್ತರು ತಲುಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...