ಬೆಂಗಳೂರು: ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿ ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಜಾತಿ ನಿಂದನೆ ಹಾಗೂ ಜೀವ ಬೆದರಕಿಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕುಳ್ಳ ದೇವರಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 34, 504 ಹಾಗೂ ಎಸ್ ಸಿ, ಎಸ್ ಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಸೈಟ್ ವಿಚಾರವಾಗಿ ಕೃಷ್ಣಮೂರ್ತಿ ಎಂಬುವವರಿಗೆ ಕುಳ್ಳ ದೇವರಾಜ್ ಧಮ್ಕಿ ಹಾಕಿ ಜೀವಬೆದರಿಕೆಯೊಡ್ಡಿದ್ದಲ್ಲದೇ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಕೃಷ್ಣಮೂರ್ತಿ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.