ಮಡಿಕೇರಿ: ಲಂಚ ಪಡೆಯುತ್ತಿದ್ದಾಗ ಕೊಡಗು ಜಿಲ್ಲೆಯ ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಪಿ.ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. ೪೯ ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮುಂಗಣ ಹಣವಾಗಿ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಇಇ ಪಿ.ಅಶೋಕ್ ಕುಮಾರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.