ಮಂಡ್ಯ: ತಲೆಯ ಮೇಲೆ ವಿದ್ಯುತ್ ಕಂಬ ಕುಸಿದು ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕರಿಗೌಡ (60) ಮೃತ ದುರ್ದೈವಿ. ಟ್ರಾನ್ಸ್ ಫಾರ್ಮರ್ ಅಳವಡಿಸಲೆಂದು ಸೆಸ್ಕ್ ಸಿಬ್ಬಂದಿ ರೈತ ಕರಿಗೌಡ ಅವರನ್ನು ಕರೆದೊಯ್ದಿದ್ದರು. ಟಿಸಿ ಅಳವಡಿಸುವ ವೇಳೆ ವಿದ್ಯುತ್ ಕಂಬ ಬಿದ್ದು ಕರಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.