alex Certify BIG NEWS: ಕುಸಿದು ಬಿದ್ದ ಸಾರ್ವಜನಿಕ ಶೌಚಾಲಯ; ಮೂವರು ಮಹಿಳೆಯರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಸಿದು ಬಿದ್ದ ಸಾರ್ವಜನಿಕ ಶೌಚಾಲಯ; ಮೂವರು ಮಹಿಳೆಯರಿಗೆ ಗಂಭೀರ ಗಾಯ

ವಿಜಯಪುರ: ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಜೋರಾಗಿದೆ. ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಅವಘಡವೊಂದು ಸಂಭವಿಸಿದೆ.

ಭಾರಿ ಮಳೆಯಿಂದಾಗಿ ಸಾರ್ವಜನಿಕ ಶೌಚಾಲಯ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಜುಮನಾಳದಲ್ಲಿ ಈ ಘಟನೆ ನಡೆದಿದೆ.

ಕಮಲಾಬಾಯಿ ಬಗಲಿ, ಮುಸ್ಕಾನ್, ಮುರ್ತುಜಭಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಶೌಚಾಲಯ ಕುಸಿದು ಬಿದ್ದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...