ಬೆಂಗಳೂರು: ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಮೂರು ಕೃಷಿ ಮಸೂದೆ ವಾಪಸ್ ಪಡೆದ ಪ್ರಧಾನಿ ಮೋದಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಯಾವುದೇ ಒಣ ಪ್ರತಿಷ್ಠೆಗೆ ಒಳಗಾಗದೇ ವಿವಾದಿತ ಕಾಯ್ದೆ ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಕೆಲವು ದೇಶಗಳಲ್ಲಿ ಈ ಕಾರಣಕ್ಕೆ ಅನುಸರಿಸಲಾಗುತ್ತೆ ಎಡಭಾಗದ ಸಂಚಾರ ನಿಯಮ
ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಏಕಾಏಕಿ ಮೂರು ಕೃಷಿ ಕಾಯ್ದೆ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಒಂದು ವರ್ಷದಿಂದ ದೇಶಾದ್ಯಂತ ನಡೆಯುತ್ತಿದ್ದ ರೈತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ.