ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ರೈತ ವಿರೋಧಿಯಲ್ಲ, ಆದರೆ ಕೆಲವರಿಗೆ ಮನವರಿಕೆ ಮಾಡಿಕೊಡಲು ವಿಫಲರಾಗಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕೃಷಿ ತಿದ್ದುಪಡಿ ಮಸೂದೆಯಲ್ಲಿ ರೈತರಿಗೆ ಮಾರಕವಾದ ಅಂಶಗಳಿಲ್ಲ, ಆದರೆ ಕೆಲವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಒಂದಲ್ಲ ಒಂದು ದಿನ ರೈತರೇ ಈ ಸುಧಾರಣೆ ಕಾಯ್ದೆಯನ್ನು ಜಾರಿಗೆ ತನ್ನಿ ಎಂದು ರೈತರೇ ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ರೀಡೂ ಒಂದು ಭ್ರಷ್ಟಾಚಾರದ ಕೂಪ. ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸಿದ್ರೆ ಸತ್ಯ ಬಯಲಾಗುತ್ತೆ. ಕಾಂಗ್ರೆಸ್ ನವರು ಎಷ್ಟು ಪ್ರಾಮಾಣಿಕರೆಂದು ತಿಳಿದುಬರುತ್ತದೆ ಎಂದು ವಾಗ್ದಾಳಿ ನಡೆಸಿದರು.