ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಪಂಜಾಬ್ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್, ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ನಿರ್ಧಾರ ಸ್ವಾಗತಾರ್ಹ. ಗುರುನಾನಕ್ ಜಯಂತಿಯಂದೇ ಕಾಯ್ದೆ ವಾಪಸ್ ಪಡೆದಿದ್ದೀರಿ. ಕೇಂದ್ರ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸಲಿ ಎಂದು ಹೇಳಿದ್ದಾರೆ.
ಅಧ್ಯಯನದಲ್ಲಿ ಗೊತ್ತಾಯ್ತು ವ್ಯಾಯಾಮದ ವರದಾನ: ಕಾಯಿಲೆಗಳಿಗೆ ನಮ್ಮಲ್ಲೇ ಚಿಕಿತ್ಸೆ
3 ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ರೈತರು ಕಳೆದ ಒಂದು ವರ್ಷದಿಂದ ಹೋರಾಟಕ್ಕೆ ಇಳಿದಿದ್ದರು. ಅನ್ನದಾತನ ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೂ ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಹಿಂಪಡೆದಿದೆ.