ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವರು, ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ಮಿಲೆಟ್ ರಿದ್ಸರ್ಚ್ ಸಂಸ್ಥೆಗೆ ಅಗತ್ಯ ನೆರವು ಒದಗಿಸಲಾಗುವುದು ಎಂದರು.
ಈ ಸಂಸ್ಥೆಗೆ ಸೆಂಟರ್ ಆಫ್ ಎಕ್ಸಲೆನ್ಸ್ ಉಪಕ್ರಮದ ಮೂಲಕ ಬೆಂಬಲಿಸಲಾಗುವುದು ಎಂದು ಹೇಳಿದರು.