alex Certify BIG NEWS: ಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಂಡಿದ್ದಾರೆ; ಕೃಷ್ಣ ಮಠಕ್ಕೆ ಭೇಟಿ ನೀಡಿ ಪಾಪ ಕಳೆದುಕೊಳ್ಳಲಿ; K.S. ಈಶ್ವರಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷ್ಣನ ಶಾಪದಿಂದ ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಂಡಿದ್ದಾರೆ; ಕೃಷ್ಣ ಮಠಕ್ಕೆ ಭೇಟಿ ನೀಡಿ ಪಾಪ ಕಳೆದುಕೊಳ್ಳಲಿ; K.S. ಈಶ್ವರಪ್ಪ ಹೇಳಿಕೆ

ಉಡುಪಿ: ಕೃಷ್ಣನ ಶಾಪದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಹಲವು ಬಾರಿ ಉಡುಪಿಗೆ ಬಂದಿದ್ದರು. ಆದರೆ ಒಮ್ಮೆಯೂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ. ಭಕ್ತ ಕನಕದಾಸರ ಪುತ್ಥಳಿ ಕೃಷ್ಣ ಮಠದಲ್ಲಿದೆ. ಇಂತಹ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಯಾಕೆ ಭೇಟಿ ಕೊಡಲಿಲ್ಲ ? ಎಂದು ಪ್ರಶ್ನಿಸಿದ್ದಾರೆ.

ಕೃಷ್ಣ ಮಠಕ್ಕೆ ಸಿದ್ದರಾಮಯ್ಯ ಬಂದರೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಹೇಳುತ್ತಿದ್ದೇನೆ. ಕೃಷ್ಣ ಮಠಕ್ಕೆ ಬಂದು ಸಿದ್ದರಾಮಯ್ಯ ತಮ್ಮ ಪಾಪ ಕಳೆದುಕೊಳ್ಳಲಿ. ಸಿದ್ದರಾಮಯ್ಯ ಮೇಲಿನ ಪ್ರೀತಿಯಿಂದ ಈ ಮಾತು ಹೇಳುತ್ತಿದ್ದೆನೆ. ಸಿದ್ದರಾಮಯ್ಯ ಎಲ್ಲಾ ದೇವಾಲಯಗಳಿಗೆ ಹೋಗುತ್ತಾರೆ. ಆದರೆ ಕೃಷ್ಣಮಠಕ್ಕೆ ಬರುವುದಿಲ್ಲ. ಮಠಗಳಿಗೂ ಸಿದ್ದರಾಮಯ್ಯ ಹಣ ಕೊಡುತ್ತಾರೆ. ನಮ್ಮಿಬ್ಬರ ನಡುವಿನ ಸ್ನೇಹ ಚೆನ್ನಾಗಿದೆ. ಅವರಿಗೆ ಒಳ್ಳೆಯದಾಗಲೆಂದು ಹೇಳುತ್ತಿದ್ದೇನೆ ಕೃಷ್ಣ ಮಠಕ್ಕೆ ಭೇಟಿ ನೀಡಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...