
ನವದೆಹಲಿ: ಕೃಷ್ಣ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ 5000 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಎಐಬಿಪಿಯಿಂದ ಅನುದಾನ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷ್ಣ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡಿದೆ ಎಂದರು.
ಎಐಬಿಪಿಯಲ್ಲಿ 60:40 ಹಣ ನೀಡಲಾಗುತ್ತೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಲಾಗಿದೆ. ಇನ್ನು ಕೆಲವು ಯೋಜನೆಗಳಿಗಾಗಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.