ಬೆಂಗಳೂರು: ಕೆಎಂಎಫ್ ಹಾಗೂ ಅಮೂಲ್ ವಿಲೀನ ಎಂಬುದು ತಪ್ಪು ತಿಳುವಳಿಕೆಯಾಗಿದೆ. ಊಹೆ ಮಾಡಿ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಯಾವಾಗಲೂ ಕಾಯ್ದುಕೊಳ್ಳಲಿದೆ. ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಸುಮ್ಮನೆ ಊಹೆ ಮಾಡಿ ಟೀಕೆ ಮಾಡುವುದು ಸರಿಯಲ್ಲ ಎಂದರು.
ಕೆಎಂಎಫ್ ಹಾಗೂ ಅಮೂಲ್ ಒಬ್ಬರಿಗೊಬ್ಬರು ಸಹಕಾರದಿಂದ ತಾಂತ್ರಿಕವಾಗಿ ಮಾರುಕಟ್ಟೆಯಲ್ಲಿ ಮುಂದುವರೆಯಬೇಕು ಎಂದಿದ್ದಾರೆ. ಅಮಿತ್ ಶಾ ಮಾತನಾಡಿರುವುದು ಸ್ಪಷ್ಟವಾಗಿದೆ. ಎರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಹೇಳಿದರು.