ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಬಿಗ್ ಶಾಕ್ ನೀಡಿದೆ. ಡಿ.ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಆರ್.ಆರ್. ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಸಂಸ್ಥೆ ಸೇರಿದಂತೆ ಡಿ.ಕೆ. ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.