ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದಕ್ಷಿಣ ಕನ್ನಡ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಸೆ.29ರಂದು ಡಿ.ಕೆ.ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಡಿಜಿ ಹಾಗೂ ಐಜಿಪಿಗೆ ನ್ಯಾಯಾಲಯ ನೋಟೀಸ್ ನೀಡಿದೆ.
ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸಮಸ್ಯೆ ಕುರಿತಾಗಿ ಬೆಳ್ಳಾರೆಯ ವರ್ತಕರ ಸಂಘದ ಅಧ್ಯಕ್ಷ ಸಾಯಿ ಗಿರಿಧರ್ ರೈ ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿ ದೂರಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಗಿರಿಧರ್ ನಡುವೆ ಫೋನ್ ನಲ್ಲೇ ವಾಗ್ವಾದ, ಮಾತಿನ ಚಕಮಕಿ ನಡೆದಿತ್ತು. ಈ ಬಗ್ಗೆ ಡಿ.ಕೆ.ಶಿವಕುಮಾರ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಗಿರಿಧರ್ ರೈ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿ.ಕೆ.ಶಿವಕುಮಾರ್ ಕೋರ್ಟ್ ಗೆ ಬರಬೇಕಿತ್ತು. ಆದರೆ ಹಲವು ಬಾರಿ ನೋಟೀಸ್ ನೀಡಿದರೂ ಡಿಕೆಶಿ ಕೋರ್ಟ್ ಗೆ ಹಾಜರಾಗಿರಲಿಲ್ಲ.
ಇನ್ನೂ ಮುಗಿದಿಲ್ಲ ನಟ ಗೋವಿಂದ- ಅಳಿಯ ಕೃಷ್ಣಾ ಅಭಿಷೇಕ್ ಶೀತಲ ಸಮರ
ಈ ಹಿನ್ನೆಲೆಯಲ್ಲಿ ಇದೀಗ ಸುಳ್ಯ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದ್ದು, ಸೆ.29ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.