ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒತ್ತುವರಿ ಬಗ್ಗೆ ತನಿಖೆ ಮಾಡಿಯೇ ಮಾಡುತ್ತೇವೆ. ತನಿಖೆಯ ಸ್ವರೂಪದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ. ಕೆರೆಗಳನ್ನು ಯಾವ ರೀತಿ ಒತ್ತುವರಿ ಮಾಡಲಾಯಿತು. ಹೇಗೆಲ್ಲ ಮುಚ್ಚಲಾಯಿತು. ಅನುಮತಿ ಕೊಟ್ಟವರು ಯಾರು? ಎಂಬೆಲ್ಲದರ ಬಗ್ಗೆಯೂ ವಿವರಿಸುತ್ತೇನೆ ಎಂದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚುವ ಬಗ್ಗೆಯೂ ತಿಳಿಸಲಾಗುವುದು. ಕೆರೆ ಒತ್ತುವರಿ, ರಾಜಕಾಲುವೆ ಒತ್ತುವರಿ ಈ ಎಲ್ಲದರ ಬಗ್ಗೆಯೂ ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.