alex Certify BIG NEWS: ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ – ಹೇಮಾವತಿ – ಕಾವೇರಿ ನದಿಯ ತ್ರಿವೇಣಿ ಸಂಗಮ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿದ್ದು, ಈ ಮಹಾ ಕುಂಭಮೇಳದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.

ಸಚಿವ ಡಾ. ನಾರಾಯಣಗೌಡ ಲಕ್ನೋದಲ್ಲಿ ಇಂದು ಖುದ್ದಾಗಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ ವೇಳೆ ಅಕ್ಟೋಬರ್ 16 ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಈ ಭೇಟಿ ಸಂದರ್ಭದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಕನಾಥೇಶ್ವರನ ಸಂಬಂಧದ ಬಗ್ಗೆ ಯೋಗಿ ಆದಿತ್ಯನಾಥ್ ಮೆಲುಕು ಹಾಕಿದ್ದಾರೆ. ಅಲ್ಲದೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತೂ ಅವರು ಚರ್ಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...