alex Certify BIG NEWS: ಕೆ.ಎಸ್. ಈಶ್ವರಪ್ಪ ಅಸಮಾಧಾನ; ಅವರ ಭಾವನೆಗಳು ಅರ್ಥವಾಗುತ್ತೆ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್. ಈಶ್ವರಪ್ಪ ಅಸಮಾಧಾನ; ಅವರ ಭಾವನೆಗಳು ಅರ್ಥವಾಗುತ್ತೆ ಎಂದ ಸಿಎಂ

ಬೆಳಗಾವಿ: ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಭಾವನೆಗಳು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಜೊತೆ ಸಂಪರ್ಕದಲ್ಲಿದ್ದೇನೆ. ಅವರ ಭಾವನೆಗಳು ಅರ್ಥವಾಗುತ್ತದೆ ಎಂದರು.

ಈಶ್ವರಪ್ಪ, ಜಾರಕಿಹೊಳಿ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ವರಿಷ್ಠರೂ ಕೂಡ ಸಕಾರಾತ್ಮಕ ವಾಗಿ ಪ್ರತಿಕ್ರಿಯಿಸಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...