ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿದ್ದ ಮಾರ್ಗ ಮಧ್ಯೆ ಬೆಂಕಿ ಅವಘಡ ಸಂಭವಿಸಿದ್ದು, ಮೌಂಟ್ ಕಾರ್ಮೆಲ್ ಕಾಲೇಜು ಬಳಿ ರಸ್ತೆಯಲ್ಲಿ ಕೇಬಲ್ ಗೆ ಬೆಂಕಿ ಹೊತ್ತಿಕೊಂಡಿದೆ.
ಡ್ರೈನ್ ಮೇಲೆ ಕಾರು ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಡರ್ ಗ್ರೌಂಡ್ ಎಲೆಕ್ಟ್ರಿಕ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಇನ್ನಿತರ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡ ಹಿನ್ನೆಲೆಯಲ್ಲಿ ಅರಮನೆ ಮೈದಾನಕ್ಕೆ ತೆರಳಬೇಕಿದ್ದ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.