ನವದೆಹಲಿ: ಕೋವಿಡ್ ಸಂಕಷ್ಟದ ನಡುವೆಯೇ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ದೇಶದ ಜನತೆಗೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಕ್ಷೇತ್ರಕ್ಕೆ ಏನೆಲ್ಲಾ ಕೊಡುಗೆಗಳನ್ನು ನೀಡಬಹುದು ಎಂಬ ಕುತೂಹಲ ಹೆಚ್ಚಿದೆ. ಪ್ರಮುಖವಾಗಿ ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಒತ್ತು ಸಿಗಲಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೋವಿಡ್ ಸಂದರ್ಭದಲ್ಲಿ ನಾವು ಹಲವು ನಿರೀಕ್ಷೆಗಳನ್ನು ಹೊಂದಿದ್ದೇವೆ. ಎಲ್ಲಾ ಕ್ಷೇತ್ರಗಳಿಗೂ ನಿರೀಕ್ಷೆ ಇದೆ. ಆದರೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ವಿಶ್ವಾಸವಿದೆ ಎಂದರು.
ಮಹಿಳೆ, ಯುವಜನತೆಗೂ ಒಳ್ಳೆಯ ಆಯವ್ಯಯ ಸಿಗಲಿದೆ. ಪ್ರಧಾನಿ ಮೋದಿ ಆಶಯಗಳಿಗೆ ಅನುಗುಣವಾಗಿ ಬಜೆಟ್ ಇರಲಿದೆ. 850 ಕೋಟಿ ರಾಜ್ಯಕ್ಕೆ ಬಿಡುಗಡೆ ಮಾಡಲಾಗಿತ್ತು. ವಿಶೇಷವಾಗಿ ಟೆಸ್ಟಿಂಗ್ ಗೆ ನೆರವು ನೀಡಬೇಕು. ಶೇ.20ರಷ್ಟು ಟೆಸ್ಟಿಂಗ್ ಬಗ್ಗೆ ಆದ್ಯತೆ ನೀಡಬೇಕು ಎಂದು ಹೇಳಿದರು.