ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳೆಯರು, ಯುವಕರು, ಎಸ್ ಸಿ ಎಸ್ ಟಿ ವರ್ಗದವರಿಗೆ ಬಜೆಟ್ ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು ಪ್ರಸ್ತಕ್ತ ಆರ್ಥಿಕ ವರ್ಷದಲ್ಲಿ ಶೇ.7ರಷ್ಟು ವೃದ್ಧಿಯಾಗಿದೆ. ಭಾರತದ ಪ್ರಗತಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದರು.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಗೆ 2 ಲಕ್ಷ ಕೋಟಿ ಮೀಸಲಿಡಲಾಗಿದ್ದು, ಮುಂದಿನ ಒಂದು ವರ್ಷಕ್ಕೆ ಯೋಜನೆ ವಿಸ್ತರಣೆ ಮಾಡಲಾಗಿದೆ. 220 ಕೋಟಿ ಕೋವಿಡ್ ವ್ಯಾಕ್ಸಿನ್ ನೀಡುವಲ್ಲಿ ಯಶಸ್ವಿಯಾಗಲಾಗಿದೆ.
47 ಕೋಟಿ ಜನಧನ್ ಅಕೌಂಟ್ ಗಳು ಒಪನ್ ಆಗಿವೆ. 81 ಲಕ್ಷ ಸ್ವಸಹಾಯ ಗುಂಪುಗಳಿಗೆ ಸಹಾಯ. ಮುಂದಿನ ಒಂದು ವರ್ಷದಲ್ಲಿ ಬಡವರ ಮನೆಗೆ ಆಹಾರ ವಿತರಣೆ ಮಾಡಲಾಗುವುದು ಎಂದರು.