ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ಹೊಸ ಯುವ ಮುಖಗಳಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದ್ದಾರೆ. ಹಲವು ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಕ್ಯಾಬಿನೆಟ್ ಪುನಾರಚನೆ ವೇಳೆ ರಾಜ್ಯಕ್ಕೆ ಎರಡು ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ ದಿ.ಸುರೇಶ್ ಅಂಗಡಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಮತ್ತೋರ್ವ ಲಿಂಗಾಯತ ಸಮುದಾಯ ಸಂಸದರಿಗೆ ಅವಕಾಶ ನೀಡುವ ಬಗ್ಗೆ ಹಾಗೂ ಓರ್ವ ದಲಿತ ನಾಯಕನಿಗೆ ಸ್ಥಾನ ನೀಡುವ ಬಗ್ಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸರ್ಕಾರದಿಂದ ಪ್ರತಿ ಕುಟಂಬಕ್ಕೆ 10 ಸಾವಿರ ರೂ. ಕೊಟ್ರೆ ದರಿದ್ರ ಬರಲ್ಲ, ಕೆರೆಗಳ ನುಂಗಿ ನೀರು ಕುಡಿದ ಬಿಜೆಪಿಯವರು: HDK ವಾಗ್ದಾಳಿ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ, ಸಿಎಂ ಬಿ.ಎಸ್.ವೈ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಶಿವಕುಮಾರ್ ಉದಾಸಿ ಅಥವಾ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಕೂಬಾ ಅವರಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇದೆ. ಇನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗೆದ್ದಿರುವ ಕಲಬುರ್ಗಿ ಸಂಸದ ಡಾ.ಉಮೇಶ್ ಜಾದವ್ ಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.