ಬೆಂಗಳೂರು: ಕೇಂದ್ರ ಸಚಿವರ ರ್ಯಾಲಿ ವೇಳೆ ಅವಘಡವೊಂದು ಸಂಭವಿಸಿದ್ದು, ಪೊಲೀಸರ ಕಾಲಿನ ಮೇಲೆಯೇ ಜೀಪಿನ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಸ್ವಾಗತಿಸುವ ಕಾರ್ಯಕ್ರಮದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸಚಿವ ನಾರಾಯಣಸ್ವಾಮಿ ಮೆರವಣಿಗೆ ನಡೆಸುತ್ತಿದ್ದ ಜೀಪ್ ನ ಚಕ್ರ ಪೊಲೀಸ್ ಸಿಬ್ಬಂದಿ ಕಾಲಿನ ಮೇಲೆ ಹರಿದಿದೆ.
ಚಿಕ್ಕಜಾಲಠಾಣೆ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.