ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಭಾನುವಾರ ಲಖಿಂಪುರದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಅಜಯ್ ಮಿಶ್ರಾ ಪುತ್ರ ಆಶಿಶ್ ರೈತರ ಮೇಲೆ ಕಾರು ಹರಿಸಿದ ಆರೋಪ ಕೇಳಿಬಂದಿತ್ತು. ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದರು. ಆನಂತರದಲ್ಲಿ ನಡೆದ ಹಿಂಸಾಚಾರದಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು.
BIG BREAKING: ಕಾರ್ ಹರಿಸಿ ರೈತರ ಹತ್ಯೆ ಮಾಡಿದ್ದ ಪ್ರಕರಣ; ಆಶಿಶ್ ಮಿಶ್ರಾ ಅರೆಸ್ಟ್
ರೈತರ ಮೇಲೆ ಹರಿದ ಎರಡು ವಾಹನಗಳಲ್ಲಿ ಒಂದು ಕಾರನ್ನು ಆಶಿಶ್ ಮಿಶ್ರಾ ಓಡಿಸುತ್ತಿದ್ದರು. ಆಶಿಶ್ ಮಿಶ್ರಾನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದರು. ಪ್ರಕರಣದ ಬೆನ್ನಲ್ಲೇ ಇಂದು ಆಶಿಶ್ ಮಿಶ್ರಾ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದು, 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ಇದೀಗ ಆಶಿಶ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.