ನವದೆಹಲಿ: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸಿಬ್ಬಂದಿ ಇಲಾಖೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದ ಅವರು, ಕೇಂದ್ರ ಸರ್ಕಾರದ ನಾನಾ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. 2020 ರ ಮಾರ್ಚ್ 1 ರ ವೇಳೆಗೆ ಎಲ್ಲಾ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 40,04,941 ಉದ್ಯೋಗಿಗಳ ಅವಕಾಶವಿದ್ದು, ಇವುಗಳಲ್ಲಿ 31,32,698 ಹುದ್ದೆಗಳಿಗೆ ಉದ್ಯೋಗಿಗಳು ಇದ್ದಾರೆ. 8.72 ಹುದ್ದೆಗಳು ಖಾಲಿ ಉಳಿದಿವೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗದಿಂದ 25,267 ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿ ಆಯ್ಕೆ ಆಯೋಗದಿಂದ 2,14,605 ಹಾಗೂ ರೈಲ್ವೆ ನೇಮಕಾತಿ ಮಂಡಳಿಯಿಂದ 2,04,945 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.