ನವದೆಹಲಿ: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ. ಅದಾನಿ ಕುರಿತು ಜೆಪಿಸಿ ತನಿಖೆಗೆ ಎಲ್ಲಾ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ತನಿಖೆ ನಡೆಸಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, ಎರಡುವರೆ ವರ್ಷದಲ್ಲಿ ಗೌತಮ್ ಅದಾನಿ ಸಂಪತ್ತು ಹೆಚ್ಚಾಗಿದೆ. ಕೇವಲ ಓರ್ವ ವ್ಯಾಪಾರಿಗೆ ಸರ್ಕಾರ ಎಲ್ಲಾ ಟೆಂಡರ್ ಗಳನ್ನು ನೀಡಿದೆ ಎಂದು ಆರೋಪಿಸಿದರು.
ಭಾಷಣದಿಂದ ಮಾತ್ರ ಯಾವುದೇ ಕೆಲಸ ಆಗುವುದಿಲ್ಲ. ಹೇಳಿದ್ದನ್ನು ಮಾಡಿ ತೋರಿಸಬೇಕು. ಓರ್ವ ಉದ್ಯಮಿಗೆ ಎಲ್ಲಾ ಟೆಂಡರ್ ಗಳನ್ನು ಕೊಡಲು ಕಾರಣವೇನು? ಜನರ ಹಣ ಓರ್ವ ಉದ್ಯಮಿಯ ಪಾಲಾಗುತ್ತಿದೆ. ದೇಶದ ಸಂವಿಧಾನ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.