
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ ಮಾಡುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ.
ಈ ಕುರಿತು ರೈತ ಮುಖಂಡ ಕುರಬೂರು ಶಾಂತಕುಮಾರ್, ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿಯೇ ಅಕ್ಕಿ ಖರೀದಿ ಮಾಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ರೈತರಿಂದ ಭತ್ತ, ರಾಗಿ, ಜೋಳವನ್ನು ನೇರವಾಗಿ ಖರೀದಿಸಿ ಅನ್ನಭಾಗ್ಯ ಯೋಜನೆಗಾಗಿ ಬಳಸಿ. ಇದರಿಂದ ರಾಜ್ಯದ ರೈತರು, ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಉಚಿತ ವಿದ್ಯುತ್ ವಿಚಾರವನ್ನೂ ಪ್ರಸ್ತಾಪಿಸಿರುವ ಶಾಂತಕುಮಾರ್, ಉಚಿತ ವಿದ್ಯುತ್ ಬದಲಾಗಿ ಪ್ರತಿ ಮನೆಗೂ ಸೋಲಾರ್ ವ್ಯವಸ್ಥೆ ಕಲ್ಪಿಸಿ ಎಂದು ಸಲಹೆ ನೀಡಿದ್ದಾರೆ.