ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ಇದೀಗ ಹೊಸ ವೈರಸ್ ಪತ್ತೆಯಾಗಿದ್ದು, ಕೊರೊನಾ ಬೆನ್ನಲ್ಲೇ ರಾಜ್ಯದಲ್ಲಿ ಆತಂಕವನ್ನು ಹೆಚ್ಚಿಸಿದೆ.
ನೊರೊವೈರಸ್ ಎಂಬ ಹೊಸ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ಡಾ.ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. ಕಳೆದ ಎರಡು ವಾರಗಳ ಅಂತರದಲ್ಲಿ 13 ಜನರಲ್ಲಿ ಈ ವೈರಸ್ ದೃಢಪಟ್ಟಿದೆ.
ವಯನಾಡ್ ನ ಹಲವು ಜನರಲ್ಲಿ ನೊರೊವೈರಸ್ ಪತ್ತೆಯಾಗಿದ್ದು, ಸೋಂಕಿನ ಬಗ್ಗೆ ಜನರು ಹೆಚ್ಚು ಮುಂಜಾಗೃತೆ ವಹಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ನೊರೊವೈರಸ್ ಪ್ರಾಣಿಗಳಿಂದ ಹರಡುವ ರೋಗವಾಗಿದ್ದು, ಅತಿಸಾರ, ಹೊಟ್ಟೆನೋವು, ವಾಂತಿ, ಜ್ವರ, ತಲೆನೋವು ಪ್ರಮುಖ ಲಕ್ಷಣವಾಗಿದೆ. ಈ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯುವಂತೆ ಸಚಿವರು ಮನವಿ ಮಾಡಿದ್ದಾರೆ.